ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ಶಾಲಾ ಪ್ರಾರಂಭೋತ್ಸವ

31.npk-2
Published on

ನಾಪೋಕ್ಲು: ಹೋಬಳಿ ವ್ಯಾಪ್ತಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಸೋಮವಾರ ಸಂಭ್ರಮದಿಂದ ಆಚರಿಸಲಾಯಿತು.
ಇಲ್ಲಿನ ಸರ್ಕಾರಿ ಶಾಲೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಿ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.


ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರಗಳನ್ನು ವಿತರಿಸಲಾಯಿತು. ಸಮೀಪದ ಎಮ್ಮೆಮಾಡಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಅಶ್ರಫ್, ಮಾಜಿ ಅಧ್ಯಕ್ಷ ಪಿ.ಎಂ. ಇಬ್ರಾಹಿಂ ಹಾಜಿ, ಪಾಲಕ ವೃಂದದವರು ಹಾಗೂ ಎಸ್‌ಡಿಎಂಸಿ ಸದಸ್ಯರು ಹಾಜರಿದ್ದರು.


ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲೂ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯ ಪ್ರವೇಶ ದ್ವಾರದಿಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಬರಮಾಡಿಕೊಂಡರು ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿ ಮಧ್ಯಾಹ್ನ ಸಿಹಿಯೊಂದಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು.


ಶಾಲಾ ಎಸ್‌ಡಿಎಂಸಿ ಸದಸ್ಯರು, ಪಾಲಕರು ಹಾಜರಿದ್ದರು. ಹೋಬಳಿ ವ್ಯಾಪ್ತಿಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net