ನಾಮ ನಿರ್ದೇಶಿತ ಸದಸ್ಯರಾಗಿ ಎಂ. ಮಹಾದೇಶ್

M MAHADESH
Published on

ಹನೂರು: ಪಟ್ಟಣದ ಮಾರಿಗುಡಿ ಬೀದಿಯ ಎಂ. ಮಹಾದೇಶ್ ಅವರನ್ನು ಪಟ್ಟಣ ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ ಅವರು ನ.21 ರಂದು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಪ್ರಕರಣ 352 (1)(ಬಿ) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಅ.21 ರಂದು ಪಟ್ಟಣದ ಎನ್. ನವೀನ್ ಹಾಗೂ ಎಂ. ಬಸವರಾಜು ಈ ಇಬ್ಬರನ್ನು ಪಟ್ಟಣ ಪಂಚಾಯಿತಿ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿತ್ತು. ಆದರೆ ಕೆಲವು ಕಾರಣಾಂತರದಿಂದ ಖಾಲಿ ಇದ್ದ ಮತ್ತೊಂದು ಸ್ಥಾನಕ್ಕೆ ನಾಮ ನಿರ್ದೇಶಿತವಾಗಿರಲಿಲ್ಲ. ಗುರುವಾರ ಎಂ. ಮಹಾದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪಟ್ಟಣ ಪಂಚಾಯಿತಿಗೆ ಸದಸ್ಯರನ್ನಾಗಿ ಸರ್ಕಾರವು ನಾಮ ನಿರ್ದೇಶನ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net