

ಕಲಬುರಗಿ: ಗುಲ್ಬರ್ಗ(ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮೇ ೭ ರಂದು ನಡೆಯುವ ಚುನಾವಣೆಗೆ ಏ.೧೨ರಂದು ಚುನಾವಣಾ ಅಧಿಸೂಚನೆ ಹೊರಡಿಸಿ, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತ ೧೪೪ ಅನ್ವಯ ಸಾರ್ವಜನಿಕರ ಅನಗತ್ಯ ಓಡಾಟ ನಿಷೇಧಿಸಲಾಗಿದೆ. ಏ.೧೨ ರಿಂದ ೧೯ರವರೆಗೆ ಬೆಳಗ್ಗೆ ೧೧ರಿಂದ ಮಧ್ಯಾಹ್ನ ೩ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏ.೨೦ರಂದು ನಾಮಪತ್ರ ಪರಿಶೀಲನೆ, ಏ.೨೨ಕ್ಕೆ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಈ ವೇಳೆ ಜನರು ಡಿಸಿ ಕಚೇರಿ ಸುತ್ತ ಓಡಾಟ ಮಾಡಬಾರದು. ಯಾವುದೇ ರೀತಿಯ ಘೋಷಣೆ ಕೂಗುವುದು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಜಿ¯್ಲÁಧಿಕಾರಿ ಕಚೇರಿ ಆವರಣದಲ್ಲಿರುವ ಸರ್ಕಾರಿ ಕಚೇರಿಯಲ್ಲಿ ಅಗತ್ಯ ಕೆಲಸವಿದ್ದರೆ ಮಾತ್ರ ಬೆಳಗ್ಗೆ ೧೧ಕ್ಕಿಂತ ಮೊದಲು ಮತ್ತು ಮಧ್ಯಾಹ್ನ ೩ಗಂಟೆ ನಂತರ ಕಚೇರಿಗೆ ಭೇಟಿ ನೀಡಬಹುದಾಗಿದೆ. ಅನುಮಾನಾಸ್ಪದವಾಗಿ ಓಡಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಧಾಕೃಷ್ಣ ಉಮೇದುವಾರಿಕೆ ಇಂದು: ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಶುಕ್ರವಾರ ಬೆಳಗ್ಗೆ ೧೧ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಮೈದಾನದಲ್ಲಿ ೧೧.೩೦ ಗಂಟೆಗೆ ಬಹಿರಂಗ ಸಮಾವೇಶ ಏರ್ಪಡಿಸಲಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯP್ಷÀ ಡಾ.ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ, ಸಚಿವರು, ಶಾಸಕರು, ಹಿರಿಯ ನಾಯಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.