ನಾಮಪತ್ರ ಸ್ವೀಕರಿಸಲು ಸಕಲ ಸಿದ್ಧತೆ

CR PATNA (1)
ಚನ್ನರಾಯಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಎಚ್.ವಿ.ಮಂಜುನಾಥ್ ಮಾತನಾಡಿದರು. ಬಿ.ಎಂ.ಗೋವಿಂದರಾಜು ಇದ್ದರು.
Published on

ಚನ್ನರಾಯಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ.13 ರಿಂದ ಆರಂಭವಾಗಲಿದ್ದು, ನಾಮಪತ್ರ ಸ್ವೀಕರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಎಚ್.ವಿ.ಮಂಜುನಾಥ್ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ನಾಮಪತ್ರ ಸಲ್ಲಿಕೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಏ.13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದ ಏ.20ರವರೆಗೆ ನಾಮಪತ್ರಕ್ಕೆ ಸಲ್ಲಿಕೆ ಮಾಡಬಹುದಾಗಿದೆ. 21ರಂದು ಪರಿಶೀಲನೆ, 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ 10 ಮತದಾನ ನಡೆಯಲಿದ್ದು, 13ರಂದು ಫಲಿತಾಂಶ ಹೊರಬೀಳಲಿದೆ. ಅಲ್ಲದೆ ಚುನಾವಣಾ ಪ್ರಕ್ರಿಯೆ 15ಕ್ಕೆ ಪೂರ್ಣಗೊಳ್ಳಲಿದೆ ಎಂದರು.

273 ಮತದಾನ ಕೇಂದ್ರಗಳ ಪೈಕಿ 102 ಸೂಕ್ಷ್ಮ ಒಂದನ್ನು ದುರ್ಬಲ ಎಂದು ಗುರುತಿಸಲಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿಗಳ ಕಚೇರಿಗೆ ಐದು ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಕಚೇರಿಯಿಂದ 100 ಮೀಟರ್ ಒಳಗೆ ಮೂರು ವಾಹನಗಳಿಗೆ ಬರಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

9 ಸೆಕ್ಟರ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದು, 10 ಕ್ಷಿಪ್ರ ಪಡೆ ತಂಡ, 4 ವಿಡಿಯೋ ಕಣ್ಗಾವಲು ತಂಡವನ್ನು ನೇಮಕ ಮಾಡಲಾಗಿರುತ್ತದೆ ಎಂದರು.
ಸಹಾಯಕ ಚುನಾವಣಾಧಿಕಾರಿ ಬಿ.ಎಂ.ಗೋವಿಂದರಾಜು, ಮಂಜುನಾಥ್, ಅನಿಲ್ ಕುಮಾರ್, ಎನ್.ಗಿರೀಶ್‌ಬಾಬು, ಯೋಗೇಶ್, ಮಹೇಶ್, ಸುನಿಲ್, ರಶ್ಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net