

ಚಾಮರಾಜನಗರ: ಯುವಕರು ನಾಯಕತ್ವಗುಣ ಬೆಳೆಸಿಕೊಂಡು ಜೀವನದಲ್ಲಿ ಯಶಸ್ಸು ಕಾಣಬಹುದಾಗಿದೆ ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಸಲಹೆ ನೀಡಿದರು.
ನಗರದ ಎಂಸಿಎಸ್ ಶಾಲೆಯ ಕ್ರೀಡಾ ಸಾಂಸ್ಕೃತಿಕ ಸಂಘ, ಶಾಲಾ ಸಂಸತ್ ಚುನಾವಣಾ ವಿಜೇತರಿಗೆ ಪ್ರಮಾಣ ವಚನ ಬೋಧನೆ ಹಾಗೂ ಮಾವು ಹಣ್ಣಿನ ದಿನಾಚರಣೆ ಕಾರ್ಯಕ್ರಮಗಳನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಬಾಲ್ಯದಲ್ಲೇ ವಿದ್ಯಾರ್ಥಿಗಳು ಕ್ರೀಡೆ ಸಾಂಸ್ಕೃತಿಕ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡರೆ ನಾಯಕತ್ವ ಗುಣ ಬೆಳೆಯುತ್ತದೆ. ನಮ್ಮ ಸಂಸ್ಕೃತಿ ಆಚಾರ-ವಿಚಾರ ತಿಳಿಯುತ್ತದೆ. ಇದು ಗುರಿ ಸಾಧನೆಗೆ ಸಹಾಯಕ ವಾಗುತ್ತದೆ ಎಂದರು. ಪ್ರಜಾಪ್ರಭುತ್ವದ ಯಶಸ್ಸು ಯುವಪೀಳಿಗೆಯ ಮೇಲಿದೆ ಹಾಗಾಗಿಯೇ ಸರ್ಕಾರ ಶಾಲೆಗಳಲ್ಲಿ ಸಂಸತ್ ಚುನಾವಣೆ ನಡೆಸಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಮುಖ್ಯಶಿಕ್ಷಕ ಮಹದೇವಸ್ವಾಮಿ ಮಾತನಾಡಿ, ಎಸ್‌ಡಿಎಂಸಿ ಶಾಲೆಯಲ್ಲಿ ಪ್ರತಿ ವರ್ಷ ಉತ್ತಮ ಫಲಿತಾಂಶ ಬರುತ್ತಿದ್ದು, ಉತ್ತಮ ಶಿಕ್ಷಣ ನೀಡುತ್ತಿದೆ ಎಂದರು. ಸಂಸತ್ ಚುನಾವಣೆಯಲ್ಲಿ ಜಯಗಳಿಸಿದವರಿಗೆ ಪ್ರಮಾಣ ವಚನ ಬೋಧಿಸಿ ಪ್ರಮಾಣ ಪತ್ರ ನೀಡಲಾಯಿತು
ಈ ಸಂದರ್ಭದಲ್ಲಿ ಶಿಕ್ಷಕರಾದ ಶಶಿಧರ ಮೂರ್ತಿ, ಸಂಸ್ಥೆಯ ಆಡಳಿತಾಧಿಕಾರಿ ನಾಗರಾಜು ಹಾಗೂ ಇತರರು ಹಾಜರಿದ್ದರು.