ನಾಯಿಗಳ ದಾಳಿಗೆ ಸಿಲುಕಿದ್ದ ಜಿಂಕೆ ರಕ್ಷಣೆ

09 HANUR 2
ಕಂಡಯ್ಯನಪಾಳ್ಯ ಗ್ರಾಮಕ್ಕೆ ಆಗಮಿಸಿದ್ದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿದರು.
Published on

ಹನೂರು: ಅರಣ್ಯದಿಂದ ಹೊರ ಬಂದು ನಾಯಿಗಳ ದಾಳಿಗೆ ಸಿಲುಕಿದ್ದ ಜಿಂಕೆಯನ್ನು ತಾಲೂಕಿನ ಕಂಡಯ್ಯನಪಾಳ್ಯ ಗ್ರಾಮಸ್ಥರು ಭಾನುವಾರ ರಕ್ಷಿಸಿದ್ದಾರೆ.

ಸಮೀಪದ ಅರಣ್ಯ ಪ್ರದೇಶದಿಂದ ಬೆಳಗ್ಗೆ 7.30ರಲ್ಲಿ ಗ್ರಾಮಕ್ಕೆ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ದಾಳಿ ನಡೆಸುತ್ತಿದ್ದವು. ಈ ವೇಳೆ ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಗಾಯಗೊಂಡಿದ್ದ ಜಿಂಕೆಗೆ ಸೂಕ್ತ ಚಿಕಿತ್ಸೆ ನೀಡಿ ಅರಣ್ಯ ಪ್ರದೇಶಕ್ಕೆ ಬಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net