ನಾಯಿಗಳ ದಾಳಿಯಿಂದ ಜಿಂಕೆ ರಕ್ಷಣೆ

11 sor 1
ಸೊರಬದಲ್ಲಿ ನಾಯಿ ಹಾವಳಿಗೆ ಸಿಲುಕಿದ್ದ ಜಿಂಕೆ ಮರಿಯನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸುತ್ತಿರುವುದು.
Published on

ಸೊರಬ: ತಾಲೂಕಿನ ತವನಂದಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿ ಅರಣ್ಯ ಇಲಾಖೆಯ ಅಕಾರಿಗಳಿಗೆ ಒಪ್ಪಿಸಿದ್ದಾರೆ.

ಸುಮಾರು ನಾಲ್ಕು ವರ್ಷದ ಹೆಣ್ಣು ಜಿಂಕೆಯೊಂದು ಆಹಾರ, ನೀರು ಅರಸಿ ಗ್ರಾಮದತ್ತ ಬಂದಿತ್ತು. ನಾಯಿಗಳ ಹಿಂಡು ಜಿಂಕೆಯ ಮೇಲೆ ದಾಳಿ ಮಾಡಲು ಬೆನ್ನತ್ತಿದ್ದವು. ಕೂಡಲೇ ಗ್ರಾಮಸ್ಥರು, ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜಿಂಕೆಯ ಆರೋಗ್ಯ ಪರಿಶೀಲಿಸಿ ಜಿಂಕೆಯನ್ನು ಮರಳಿ ಕಾಡಿಗೆ ಬಿಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net