ನಾರಣಾಪುರದಲ್ಲಿ ಸ್ವಚ್ಛತಾ ಕಾರ್ಯ

4mlk1
ಮೇಲುಕೋಟೆ ಸಮೀಪದ ನಾರಣಾಪುರದಲ್ಲಿ ವಿಜಯ ಪ್ರಥಮದರ್ಜೆ ಕಾಲೇಜು ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಅಂಗವಾಗಿ ಶುಕ್ರವಾರ ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.
Published on

ಮೇಲುಕೋಟೆ: ಹೋಬಳಿಯ ಗಡಿಗ್ರಾಮ ನಾರಣಾಪುರದಲ್ಲಿ ಪಾಂಡವಪುರ ವಿಜಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.

ಮನೆಮನೆಗೆ ತೆರಳಿ ಗ್ರಾಮಸ್ಥರನ್ನು ಕರೆತಂದು ಶ್ರಮದಾನದಲ್ಲಿ ಕೈಜೋಡಿಸುವಂತೆ ಜಾಗೃತಿ ಮೂಡಿಸಿದರು. ಈ ಸಂದರ್ಭ ಮಾತನಾಡಿದ ಶಿಬಿರಾಧಿಕಾರಿ ಡಾ. ಎನ್.ಕೆ ವೆಂಕಟೇಗೌಡ, ಮನೆ, ಹಾಲು ಉತ್ಪಾದಕರ ಸಂಘ, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ಸುತ್ತಮುತ್ತ ಯಾವಾಗಲೂ ಸ್ವಚ್ಛತೆ ಕಾಯ್ದುಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರ ವಹಿಸಿ, ಕುಡಿಯುವ ನೀರಿನ ಮೂಲಗಳನ್ನು ಪವಿತ್ರವಾಗಿ ಇಟ್ಟುಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಜನ ಮತ್ತು ಜಾನುವಾರಗಳ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ಹೊಂದಿದರೆ ಮಾತ್ರ ಗ್ರಾಮದಲ್ಲಿ ಆರೋಗ್ಯಕರ ವಾತಾವರಣವಿರುತ್ತದೆ ಎಂದರು.


ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸೇರಿ ಗ್ರಾಮದ ಪ್ರಮುಖ ಬೀದಿಗಳ ಚರಂಡಿ, ರಸ್ತೆ, ಕುಡಿಯುವ ನೀರಿನ ಹೊಂಡವನ್ನು ಸ್ವಚ್ಛಗೊಳಿಸಿದರು. ಗ್ರಾಪಂ ಸದಸ್ಯ ನಾಗೇಶ್, ಪ್ರಾಶುಪಾಲ ಪ್ರೊ ಎಂ. ಕೃಷ್ಣಮೂರ್ತಿ, ಸಹ ಪ್ರಾಧ್ಯಾಪಕ ರಾಜೇಶ್, ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net