ನಾರಾಯಣರಾವ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ

rahul_gandhi_660_082518015613_080520010736_200820053455_230920124943
Published on

ಬೀದರ್: ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಅವರ ನಿಧನಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಸಂತಾಪ ಸೂಚಿಸಿದ್ದಾರೆ. ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರ ಹೆಸರಿನಲ್ಲಿ ಶೋಕ ಸಂದೇಶ ಪತ್ರ ರವಾನಿಸಿ, ನಾರಾಯಣರಾವ್ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷವು ಸಮರ್ಪಣಾ ಭಾವದಿಂದ ದುಡಿಯುತ್ತಿದ್ದಂಥ ನಿಷ್ಠಾವಂತ ಮುಖಂಡನನ್ನು ಕಳೆದುಕೊಂಡಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ದಣವರಿಯದೆ ದುಡಿದಿದ್ದಾರೆ. ಯಾವುದೇ ಭೇದ ಭಾವ ಮಾಡದೆ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದಾರೆ. ಅವರಲ್ಲಿದ್ದ ನಮೃತೆ, ಉದಾರತೆ ಗುಣಗಳು ಮಾದರಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ರಾಹುಲ್ ಗಾಂಧಿ ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net