

ಕೊಳ್ಳೇಗಾಲ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ (209)ಯ ತಾತ್ಕಾಲಿಕ ಬಸ್ ನಿಲ್ದಾಣದ ಬಳಿ ಬೈಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಂಚೇನಹಳ್ಳಿ ಧರ್ಮನಾಯಕನ ತಾಂಡ್ಯದ ಆನಂದನಾಯಕ(31), ಚಿಕ್ಕಬಿದರುಕಲ್ಲಿನ ರವಿ (47) ಬಂಧಿತರು. ಮತ್ತೊಬ್ಬ ಆರೋಪಿ ಬೆಂಗಳೂರಿನ ವಾಜರಹಳ್ಳಿ ಗ್ರಾಮದ ಲಕ್ಷ್ಮೀ ಎಂಬಾಕೆ ತಲೆಮರೆಸಿಕೊಂಡಿದ್ದಾಳೆ.
ಅಕ್ರಮವಾಗಿ ಹಣ ಸಂಪಾದನೆ ಮಾಡುವ ಸಲುವಾಗಿ ಫೆ.5 ರಂದು ನಾಲ್ಕು ಜೀವಂತ ನಕ್ಷತ್ರ ಆಮೆಗಳನ್ನು ಮಾರಾಟ ಮಾಡಲು ಬೈಕ್‌ನಲ್ಲಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅರಣ್ಯ ಸಂಚಾರಿ ದಳದವರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಸ್‌ಐ ವಿಜಯರಾಮ್, ಅರಣ್ಯ ಸಂಚಾರಿ ದಳದ ಹೆಡ್ ಕಾನ್‌ಸ್ಟೇಬಲ್ ತಖೀ ಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್, ಸಿಬ್ಬಂದಿ ಬಸವರಾಜು ಇದ್ದರು.