ನಾಲ್ಕು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ

Published on

ಹುಲಿಯೂರುದುರ್ಗ: ಕುಣಿಗಲ್​ ತಾಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯಲ್ಲಿ ಚಾಕಲೇಟ್​ ಕೊಡಿಸುವ ನೆಪದಲ್ಲಿ 4 ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಮೃತೂರು ಹೋಬಳಿಯ ಜಗದೀಶ್​ (35) ನನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಅಜ್ಜಿಯ ಮನೆಯಲ್ಲಿದ್ದ ಮಗುವನ್ನು ಮನೆಯ ಹಿತ್ತಲಿಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ ಎಂದು ಪಾಲಕರು ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣದಡಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net