

ಸ್ಪಂದನ ಸಾಂಸ್ಕೃತಿಕ ಪರಿಷತ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ವಿಸ್ಮಯ ಪ್ರಕಾಶನದ ಸಹಯೋಗದಲ್ಲಿ ರಾಜ್ಯಮಟ್ಟದ ಯುಗಾದಿ ಕಾವ್ಯ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.
ವಿಜಯನಗರದ ಸಾಹಿತ್ಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಂಡ್ಯದ ಲೇಖಕಿ ಎಸ್.ಗುಣಸಾಗರಿ ನಾಗರಾಜು, ಹಾಸನ ವಿಸ್ಮಯ ವಿಜೇತ ಮಾಸಪತ್ರಿಕೆಯ ಎಸ್.ಕೆ.ಶಿವಕುಮಾರ್, ಬೆಂಗಳೂರಿನ ಸಮ್ಮಿಲನ ಕಲೆ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಕುವರ ಯಲ್ಲಪ್ಪ, ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಕೆ.ಆರ್.ಪ್ರಭಾವತಿ, ತುಮಕೂರಿನ ಎಸಿಟಿಐ ಪ್ರಾಧ್ಯಾಪಕ ಪ್ರೊ.ಬಿ.ಆರ್.ರಾಮಚಂದ್ರಯ್ಯ, ಶಿವಾಜಿನಗರ ಪೊಲೀಸ್ ಠಾಣೆಯ ಮುಖ್ಯಪೇದೆ ಎಸ್.ಡಿ.ಲಕ್ಷ್ಮಿನರಸಿಂಹ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸಮಾಜ ಮುಖಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್, ಸ್ಪಂದನ ಸಾಂಸ್ಕೃತಿಕ ಪರಿಷತ್‌ನ ಟಿ.ಸತೀಶ್ ಜವರೇಗೌಡ, ಕವಯತ್ರಿ ಡಾ.ಲತಾ ರಾಜಶೇಖರ್ ಇತರರಿದ್ದರು.