

ಚಾಮರಾಜನಗರ: ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ. ಪಲ್ಲವಿ ಮೇ 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮೇ 3ರಂದು ಬೆಳಗ್ಗೆ 11 ಗಂಟೆಗೆ ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾಮಾನ್ಯ ಜನರಿಂದ ಕುಂದು ಕೊರತೆಗಳ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.