ನಾಳೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ನಾಳೆ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Published on

ಹಾಸನ: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏ.4 ಗುರುವಾರ ಬೆಳಗ್ಗೆ 11.15ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿ ಹಲವು ಮುಖಂಡರು ಉಪಸ್ಥಿತರಿರಲಿದ್ದಾರೆ.
ನಂತರ ಸಾಲಗಾಮೆ ರಸ್ತೆಯ ಜಿಲ್ಲಾ ಕ್ರೀಡಾಂಗಣದ ಮುಂಭಾಗದಿಂದ ಬೃಹತ್ ರ‌್ಯಾಲಿ ಆರಂಭವಾಗಲಿದೆ. ಮೆರವಣಿಗೆ ಸಹ್ಯಾದ್ರಿ ಸರ್ಕಲ್, ಮಹಾವೀರ ಸರ್ಕಲ್ ಮೂಲಕ ಹೇಮಾವತಿ ಪ್ರತಿಮೆ ಮುಂಭಾಗಕ್ಕೆ ಬಂದು ತಲುಪಲಿದೆ. ನಂತರ ದೇವೇಗೌಡರು, ವಿಜಯೇಂದ್ರ ಸೇರಿದಂತೆ ಪ್ರಮುಖ ನಾಯಕರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಜೆಡಿಎಸ್ ಶಾಸಕರು, ಬಿಜೆಪಿ ಶಾಸಕರು, ಉಭಯ ಪಕ್ಷಗಳ ಮಾಜಿ ಶಾಸಕರು, ಹಿರಿಯ ಮುಖಂಡರು, ಜಿಲ್ಲಾಧ್ಯಕ್ಷರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿರುವರು ಎಂದು ಜೆಡಿಎಸ್ ವಕ್ತಾರ ಹೊಂಗೆರೆ ರಘು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net