ನಾಳೆ ಗಾಂಧಿ ಭವನದಲ್ಲಿ ಪತ್ರಿಕಾ ದಿನಾಚರಣೆ

ನಾಳೆ ಗಾಂಧಿ ಭವನದಲ್ಲಿ ಪತ್ರಿಕಾ ದಿನಾಚರಣೆ
Published on

ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 14ರ ಭಾನುವಾರ ಗಾಂಧಿ ಭವನದಲ್ಲಿ ಮಾಧ್ಯಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್. ವೇಣು ಕುಮಾರ್ ತಿಳಿಸಿದರು.
ನಗರದ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಕೆ.ಎನ್ ರಾಜಣ್ಣ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು ಆಶಯ ನುಡಿಗಳನ್ನು ಆಡಲ್ಲಿದ್ದಾರೆ. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ. ಮದನಗೌಡ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ಲೀಲಾವತಿ ಹಾಗೂ ಆರ್.ಪಿ. ವೆಂಕಟೇಶಮೂರ್ತಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದರು.
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ ಶಿವಲಿಂಗೇಗೌಡ ಸನ್ಮಾನಿತರನ್ನು ಗೌರವಿಸಲಿದ್ದು, ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಬಿ.ಆರ್. ಪೂರ್ಣಿಮಾ, ಮಾಜಿ ಶಾಸಕ ಪ್ರೀತಂ ಜೆ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ವಾರ್ತಾ ಇಲಾಖೆ ಹಿರಿಯ ನಿರ್ದೇಶಕಿ ಮೀನಾಕ್ಷಮ್ಮ, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತರಾದ ರವಿ ನಾಕಲಗೂಡು ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಾವಿರ ಶಾಯರಿಗಳ ಸರದಾರ ಹಾಗೂ ಖ್ಯಾತ ಸಾಹಿತಿ ಎಫ್. ಅಸಾದುಲ್ಲಾ ಬೇಗ್ ಸಮಾರೋಪ ಭಾಷಣ ಮಾಡಲಿದ್ದಾರೆ. ಶಾಸಕರಾದ ಎ.ಮಂಜು, ಸಿ.ಎನ್ ಬಾಲಕೃಷ್ಣ, ಎಚ್.ಡಿ. ರೇವಣ್ಣ, ಸಿಮೆಂಟ್ ಮಂಜು, ಎಚ್.ಕೆ. ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಪತ್ರಕರ್ತರಾದ ಮಂಜುನಾಥ್ ದತ್ತ, ಎಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜ್ ಸೋಮನಹಳ್ಳಿ, ಹುಡಾ ಆಯುಕ್ತ ರಮೇಶ್, ನಗರಸಭೆ ಆಯುಕ್ತ ಯೋಗಾನಂದ, ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net