ನಾಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ಮಾಧ್ಯಮ ದಿನಾಚರಣೆ

ನಾಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ಮಾಧ್ಯಮ ದಿನಾಚರಣೆ
Published on

ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್‌ನಲ್ಲಿ ಮಾಧ್ಯಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪತ್ರಕರ್ತರು ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಘದ ಉಪಾಧ್ಯಕ್ಷ ಕೆ.ಎಚ್. ವೇಣುಕುಮಾರ್ ಮನವಿ ಮಾಡಿದ್ದರು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ಬೆಳಗ್ಗೆ 10.30ಕ್ಕೆ ಉದ್ಘಾಟಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಪ್ರಧಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಪತ್ರಕರ್ತದ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಆಶಯ ನುಡಿಗಳನ್ನು ನುಡಿಯಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷರಾದ ಬಾಳ್ಳು ಗೋಪಾಲ್ ವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಪಿ. ಮದನ್ ಗೌಡ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು, ಡಿಸಿ. ಎಸ್ ಪಿ, ಜಿಪಂ ಸಿಇಒ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮರೂಪ ಸಮಾರಂಭ ನಡೆಯಲಿದೆ. ನಂತರ ಕ್ರೀಡಾಕೂಟದಲ್ಲಿ ವಿಜೇತರಾದ ಪತ್ರಕರ್ತರಿಗೆ ಬಹುಮಾನ ವಿತರಣೆ ಹಾಗೂ ನಗರ ಸೇರಿದಂತೆ ತಾಲೂಕಿನ ಹಲವು ಪತ್ರಕರ್ತರು, ವಿತರಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಮಂಜು ಬನವಾಸಿ, ರಾಷ್ಟ್ರೀಯ ಮಂಡಳಿ ಸದಸ್ಯ ಜಿ. ಪ್ರಕಾಶ್, ಕಾರ್ಯಕಾರಿ ಸಮಿತಿ ಸದಸ್ಯ ಬಿ.ಆರ್. ಬೊಮ್ಮೇಗೌಡ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net