

ಹಾಸನ: ಶಾಲೆಯಲ್ಲಿ ಕಳೆದ 20 ವರ್ಷಗಳಿಂದ ತಾಲೂಕಿನ ಕಂದಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಾಗಿ ಉತ್ತಮವಾಗಿ ಕೆಲಸ ನಿರ್ವಹಿಸಿದಂತಹ ಜೆ.ಬಿ. ತಮ್ಮಣ್ಣ ಗೌಡರಿಗೆ ಹಿರಿಯ ವಿದ್ಯಾರ್ಥಿಗಳಿಂದ ಆ.18 ರಂದು ಅಭಿಮಾನದಿಂದ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಹಿರಿಯ ವಿದ್ಯಾರ್ಥಿ ಯೋಗೀಶ್ ತಿಳಿಸಿದರು.
ಶಾಲೆಯಲ್ಲಿ 2001 ರಿಂದ 2023ರವರೆಗೆ ಸಾವಿರ ವಿದ್ಯಾರ್ಥಿಗಳು ತಮ್ಮಣ್ಣಗೌಡರು ಪ್ರಾಂಶುಪಾಲರಾಗಿದ್ದ ಸಂದರ್ಭದಲ್ಲಿ ಕಲಿತು ಇಂದು ಉನ್ನತ ಶಿಕ್ಷಣದ ಜೊತೆಗೆ ಹಲವು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರೆಲ್ಲರಿಗೂ ಕೂಡ ಇವರು ಪ್ರೇರಣೆ, ನಮ್ಮ ಗುರುಗಳು ಇದೇ ಶಿಕ್ಷಣಾಧಿಕಾರಿಗಳಾಗಿ ಇದೇ ತಿಂಗಳು ಆ.31ರಂದು ಸರ್ಕಾರಿ ಸೇವೆಯಿಂದ ನಿವೃತ್ತಿಯಾಗುತ್ತಿದ್ದು, ಇದ್ದರಿಂದ ಎಲ್ಲಾ ಹಿರಿಯ ವಿದ್ಯಾರ್ಥಿಗಳು ಒಳಗೊಂಡಂತೆ ಅವರು ಅವರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಾಲೆಯಲ್ಲಿ ಇವರ ಅವಧಿಯಲ್ಲಿ ಅದೆಷ್ಟು ಬಡ ವಿದ್ಯಾರ್ಥಿಗಳಿಗೆ ಕಲಿಯಲು ನೆರವಾಗುವ ಮೂಲಕ ಸಾಕಷ್ಟು ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ತಮ್ಮ ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥದಿಂದ ಸೇವೆ ಸಲ್ಲಿಸಿರುವಂತಹ ತಮ್ಮಣ್ಣ ಗೌಡರಿಗೆ ಅಭಿನಂದನಾ ಸಮಾರಂಭ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನ ಕ್ಷೇತ್ರದ ಶಾಸಕ ಎಚ್.ಪಿ.ಸ್ವರೂಪ್ ಅವರು ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ನೆರವೇರಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಶಾಸಕರಾದ ಸಿ.ಎನ್. ಬಾಲಕೃಷ್ಣ, ಕೆ.ಎಂ ಶಿವಲಿಂಗೇಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಮಿಸಲಿದ್ದಾರೆ.
ತಮ್ಮಣ್ಣಗೌಡರು ಈ ಹಿಂದಿನ ಸಾಲಿನಲ್ಲಿ ಪ್ರತಿಭಾವಂತ ಅತಿ ಹೆಚ್ಚು ಅಂಕಗಳಿಸಿದಂತಹ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಣೆ ಮಾಡಲಿದ್ದಾರೆ. ಈ ರೀತಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವಂತಹ ತಮ್ಮಣ್ಣಗೌಡರನ್ನ ಅಭಿನಂದಿಸಲು ಹಳೆಯ ವಿದ್ಯಾರ್ಥಿಗಳು ಸಾರ್ವಜನಿಕರು ಮತ್ತು ಹಾಲಿ ವ್ಯಾಸಂಗ ಮಕ್ಕಳ ಮಾಡುತ್ತಿರುವಂತಹ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಸಂದೀಪ್,ಸುಜಯ್,ಗಿರೀಶ್,ಚಂದ್ರ ಹರೀಶ್ ಇದ್ದರು.