ನಾಳೆ ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಸಭೆ

ನಾಳೆ ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಸಭೆ
Published on

ಹಾಸನ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ.26ರಂದು ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಪಕ್ಷದ ಎಸ್ಸಿ ಎಸ್ಟಿ ಘಟಕದ ಕಾರ್ಯಕರ್ತರು ಮತ್ತು ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭಾ ಸದಸ್ಯ ಕ್ರಾಂತಿ ಪ್ರಸಾದ್ ತ್ಯಾಗಿ ತಿಳಿಸಿದರು.
ಈ ಸಭೆಗೆ ಮಾಜಿ ಪ್ರಧಾನಿ ಹಾಗೂ ನಮ್ಮ ಪಕ್ಷದ ಪರಮಚ್ಚ ನಾಯಕ ಎಚ್.ಡಿ. ದೇವೇಗೌಡರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಶಾಸಕ ಎಚ್.ಡಿ. ರೇವಣ್ಣ ಹಾಗೂ ಮಾಜಿ ಶಾಸಕರಾದ ಅನ್ನದಾನಿ, ಎಚ್.ಕೆ ಕುಮಾರಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಆಗಮಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದೇವೇಗೌಡರು ಮತ್ತು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ದಲಿತ ಸಮುದಾಯಗಳಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ ಇದನ್ನ ಜನರಿಗೆ ತಿಳಿಸುವ ಉದ್ದೇಶದಿಂದ ಈ ಸಭೆಯನ್ನ ಆಯೋಜಿಸಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರ ಮತ್ತು ಮುಖಂಡರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಘಟಕದ ಜಿಲ್ಲಾಧ್ಯಕ್ಷ ಕೆ.ಟಿ. ಮಂಜಯ್ಯ, ದಲಿತ ಮುಖಂಡರಾದ ಮರಿಯಪ್ಪ, ಶಿವನಂಜಯ್ಯ, ಮಂಜುನಾಥ್, ರಾಮಚಂದ್ರ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net