

ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನ ಹಾಗೂ ಕಬ್ಬಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ತಜ್ಞ ವೈದ್ಯರಿಂದ ಅ.4ರಂದು ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ತಾಂದಾನ ಬಳಗ, ಕಬ್ಬಹಳ್ಳಿ ಗ್ರಾಮಪಂಚಾಯಿತಿ, ಅನುಗ್ರಹ ಫೌಂಡೇಷನ್, ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಆಯೋಜಿಸಿರುವ ಶಿಬಿರ ಶನಿವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ.
ಇದರಲ್ಲಿ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು. ಸ್ಥಳದಲ್ಲಿಯೇ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅನುಗ್ರಹ ಸಂಸ್ಥೆಯ ಸಂಯೋಜಕ ಕೆ.ರಮೇಶ್ ತಮ್ಮ ಪ್ರಕಟಣೆಯಲ್ಲಿ ಕೋರಿದ್ದಾರೆ.