

ಸೋಮವಾರಪೇಟೆ: ತಲ್ತಾರೆಶೆಟ್ಟಳ್ಳಿ ಗ್ರಾಮದ ಚೌಡೇಶ್ವರಿ ಯೂತ್ ಕ್ಲಬ್ ವತಿಯಿಂದ ಮೊದಲನೇ ವರ್ಷದ ರಾಜ್ಯ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಅಬ್ಬಿಮಠ-ತಲ್ತಾರೆ ಚೌಡೇಶ್ವರಿ ದೇವಸ್ಥಾನದ ಮೈದಾನದಲ್ಲಿ ಜ.8ರಂದು ಸಂಜೆ 4 ಗಂಟೆಗೆ ಪ್ರಾರಂಭವಾಗಲಿದೆ ಎಂದು ಸಂಘದ ಅಧ್ಯಕ್ಷ ಪಿ.ಪಿ.ರವಿ ಹೇಳಿದರು.
ಪ್ರಥಮ ಬಹುಮಾನ 25 ಸಾವಿರ ರೂ., ದ್ವಿತೀಯ ಬಹುಮಾನ 15 ಸಾವಿರ ರೂ., ತೃತೀಯ ಬಹುಮಾನ 7 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ.ಎ.ಜೀವಿಜಯ, ನಗರೂರು ಎಸ್ಟೇಟ್ ಮಾಲೀಕ ಡಾ.ಮಂಥರ್‌ಗೌಡ, ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ, ಮುದ್ದಪ್ಪ, ಹರಪಳ್ಳಿ ರವೀಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಪಂ ಮಾಜಿ ಸದಸ್ಯರಾದ ಸಂಜಯ್ ಜೀವಿಜಯ, ಬಿ.ಜೆ.ದೀಪಕ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಲೋಕೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ.ಚಂದ್ರು, ಚೌಡೇಶ್ವರಿ ಯುವಕ ಸಂಘದ ಅಧ್ಯಕ್ಷ ಈಶ್ವರ ಎಚ್.ಎನ್.ಶಾಂತಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಬಿದ್ದಪ್ಪ, ಉಪಾಧ್ಯಕ್ಷೆ ಪಿ.ಬಿ.ಬೇಬಿ ಹಾಗೂ ಗ್ರಾಪಂ ಸದಸ್ಯರು ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಟಿ.ಈ.ಸತೀಶ್, ಉಪಾಧ್ಯಕ್ಷ ಎ.ಕೆ.ನವೀನ್, ಗೌರವ ಅಧ್ಯಕ್ಷ ಟಿ.ಜೆ.ಸಂತೋಷ್ ಇದ್ದರು.