ನಾಳೆ ವೀರಭದ್ರೇಶ್ವರಸ್ವಾಮಿ ದೇಗುಲ ವಾರ್ಷಿಕೋತ್ಸವ

Published on

ಗುಂಡ್ಲುಪೇಟೆ: ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಫೆ.18ರಂದು ವೀರಭದ್ರೇಶ್ವರಸ್ವಾಮಿ ದೇವಸ್ಥಾನದ 11ನೇ ವರ್ಷದ ವಾರ್ಷಿಕೋತ್ಸವ ನಡೆಯಲಿದೆ.

ಈ ಅಂಗವಾಗಿ ಬೆಳಗ್ಗೆ 5 ಗಂಟೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ವೀರಭದ್ರಾಷ್ಟೋತ್ತರ ಶತನಾಮಾವಳಿ ಮುಂತಾದ ವಿಶೇಷ ಪೂಜೆಗಳು ನೆರವೇರುತ್ತವೆ. ಬೆಳಗ್ಗೆ 9 ಗಂಟೆಗೆ ಮಹಾಮಂಗಳಾರತಿ ನಂತರ ಶ್ರೀ ವೀರಭದ್ರೇಶ್ವರಸ್ವಾಮಿ ಭಾವಚಿತ್ರವನ್ನು ವೀರಗಾಸೆ, ವಾದ್ಯಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಆದ್ದರಿಂದ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net