

ಚಿತ್ರದುರ್ಗ: ಮುರುಘಾಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ ಲೀಲಾ ವಿಶ್ರಾಂತಿತಾಣದ ಆವರಣದಲ್ಲಿ ಶಿವಶರಣ ಶಿವ ನಾಗಮಯ್ಯನವರ ಜಯಂತಿಯನ್ನು ಮೇ 12ರಂದು ಬೆಳಗ್ಗೆ 8.30ಕ್ಕೆ ಹಮ್ಮಿಕೊಳ್ಳಲಾಗಿದೆ. ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆ ವಹಿಸುವರು. ಸದಸ್ಯ ಡಾ.ಶ್ರೀ ಬಸವಕುಮಾರ ಸ್ವಾಮೀಜಿ ಸಾನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.