ನಾಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ

ನಾಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ
Published on

ಹಾಸನ: ಶ್ರೀ ಕನಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹೊಳೆನರಸೀಪುರ ತಾಲೂಕಿನ ಹಡವನಹಳ್ಳಿ ಸಂತೆ ಮೈದಾನದಲ್ಲಿ ಸೆ.1ರ ಶುಕ್ರವಾರದಂದು ನೂತನ ಸಂಘ ಉದ್ಘಾಟನೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಮುಖಂಡ ದಿವಾಕರ್ ಗೌಡ ತಿಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಎಚ್.ಎಂ. ರೇವಣ್ಣ, ಎಚ್. ವಿಶ್ವನಾಥ್, ಶಾಸಕ ಡಿ.ರವಿಶಂಕರ್ ಸೇರಿದಂತೆ ಹಲವು ಮಠಗಳ ಮಠಾಧೀಶರು, ಹಲವು ಗಣ್ಯರು ಸೇರಿದಂತೆ ಚಲನಚಿತ್ರ ನಟರು ಕೂಡ ಆಗಮಿಸಲಿದ್ದಾರೆ ಎಂದು ಬುಧವಾರ ಹೇಳಿದರು.

ಇದಲ್ಲದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮಕ್ಕೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಶಿವಣ್ಣ, ಕಾಂತರಾಜ್, ಶಾಮಸುಂದರ್ ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net