ನಾಳೆ ಸಮಾಜ ಕಲ್ಯಾಣ ಸಚಿವರ ಜಿಲ್ಲಾ ಪ್ರವಾಸ

HC-Mahadevappa
Published on

ಚಾಮರಾಜನಗರ: ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಜೂ.8 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅಂದು ಮಧ್ಯಾಹ್ನ 1.30ಗಂಟೆಗೆ ಚಾಮರಾಜನಗರ ತಾಲೂಕಿನ ಕೆಂಪನಪುರ ಗ್ರಾಮಕ್ಕೆ ಆಗಮಿಸುವರು. ಮಧ್ಯಾಹ್ನ 2 ಗಂಟೆಗೆ ಕೆಂಪನಪುರ ಗ್ರಾಮದ ಬಯಲು ರಂಗಮಂದಿರದಲ್ಲಿ ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಸಂಜೆ 4.30 ಗಂಟೆಗೆ ಚಾಮರಾಜನಗರ ಪಟ್ಟಣಕ್ಕೆ ಆಗಮಿಸಿ ಬುದ್ಧ ನಗರದ ಬಾಬಾ ಸಾಹೇಬ್ ಅಂಬೇಡ್ಕರ್ ಗ್ರಂಥಾಲಯ ಮುಂಭಾಗದ ಸಿದ್ದಾರ್ಥ ಪರಿಶಿಷ್ಠ ಜಾತಿ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಆವರಣದಲ್ಲಿ ಆಯೋಜಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net