ನಾಳೆ ಸರ್ಕಾರ ವಿರುದ್ಧ ಪ್ರತಿಭಟನೆ

06..4
ರಾಯಬಾಗ ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಶಾಸಕ ಡಿ.ಎಂ.ಐಹೊಳೆ ಮಾತನಾಡಿದರು.
Published on

ರಾಯಬಾಗ: ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದನ್ನು ಖಂಡಿಸಿ ಸೆ.8ರಂದು ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.


ರಾಯಬಾಗ ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಐದು ಗ್ಯಾರಂಟಿ ಭರವಸೆ ಹೇಳಿಕೊಂಡು ಅಕಾರಕ್ಕೆ ಬಂದ ಕಾಂಗ್ರೆಸ್ ರೈತರಿಗೆ ಅನ್ಯಾಯ ಮಾಡುತ್ತಿದೆ . ಮಳೆಯಾಗದೆ ಬೆಳೆಗಳು ಒಣಗುತ್ತಿದ್ದರೂ ವಿದ್ಯುತ್ ನೀಡುತ್ತಿಲ್ಲ ಎಂದು ಆರೋಪಿಸಿದರು. ಬರ ಘೋಷಿಸಲು ಹಿಂದೇಟು ಹಾಕುತ್ತಿದ್ದು, ಕೂಡಲೇ ರಾಯಬಾಗ ಮತ್ತು ಚಿಕ್ಕೋಡಿ ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಅಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಜೆಪಿ ಜಾರಿಗೆ ತಂದಿದ್ದ ಯೋಜನೆಗಳನ್ನು ತಡೆಹಿಡಿದು ದ್ವೇಷದ ರಾಜಕೀಯ ಮಾಡುತ್ತಿದೆ, ಆ ಯೋಜನೆಗಳನ್ನು ಮುಂದುವರಿಸುವಂತೆ ಮತ್ತು ರೈತರಿಗೆ 7 ಗಂಟೆ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಸೆ.8ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಬಿಜೆಪಿ ಕಚೇರಿಯಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ರ‌್ಯಾಲಿ ಹಮ್ಮಿಕೊಂಡಿದ್ದು ಕಾರ್ಯಕರ್ತರು ಭಾಗವಹಿಸಬೇಕೆಂದು ಕರೆ ನೀಡಿದರು.


ಮಂಡಲ ಅಧ್ಯಕ್ಷ ಬಸವರಾಜ ಡೊಣವಾಡೆ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ನವನಾಳೆ, ಜಿಲ್ಲಾ ಉಪಾಧ್ಯಕ್ಷ ಸದಾನಂದ ಹಳಿಂಗಳಿ, ಮನೋಜ ಮನಗೂಳಿ, ರಾಜು ಹರಗನ್ನವರ, ಮಹೇಶ ಬೆಳ್ಳನವರ, ಸಚಿನ ಕಾಂಬಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net