

ಹಾಸನ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು- ಸ್ವಾಯತ್ತ ಕಾಲೇ ಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ರೂಸಾ ಫಂಡೆಡ್ ಬ್ರಿಡ್ಜ್ ಕೋರ್ಸ್‌ಗೆ ಆ. 19 ರಂದು ಕಾಲೇಜಿನ ಸಭಾಂಗಣದಲ್ಲಿ ಚಾಲನೆ ನೀಡಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಬೆಂಗಳೂರು ನಿರ್ದೇಶಕ ಡಾ. ಜಿ. ಶೋಭ ಅವರು ನೆರವೇರಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಹಾಸನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಲ್.ತಿಮ್ಮೇಶ್ ಭಾಗವಹಿಸಲಿದ್ದಾರೆ. ಮತ್ತೋರ್ವ ಸಂಪನ್ಮೂಲ ವ್ಯಕ್ತಿಯಾಗಿ ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯ ಪ್ರಾಧ್ಯಾಪಕ ಬಿ.ಆರ್. ರಮೇಶ್ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಎಂ.ಬಿ. ಇರ್ಷಾದ್ ವಹಿಸುವರು. ಸಮಾರಂಭದಲ್ಲಿ ಶೈಕ್ಷಣಿಕ ಡೀನ್ ಡಿ.ಎಸ್.ರಾಜು , ಪರೀಕ್ಷಾ ನಿಯಂತ್ರಕ ಡಾ.ಕೆ.ಡಿ.ಮುರುಳೀಧರ್, ಪತ್ರಾಂಕಿತ ವ್ಯವಸ್ಥಾಪಕ ಕೆ.ಟಿ. ಸತ್ಯ ಮೂರ್ತಿ, ರೂಸಾ ಕೋ- ಆರ್ಡಿನೇಟರ್ ಸಹಾಯಕ ಪ್ರಾಧ್ಯಾಪಕರಾದ ಡಾ.ಕೆ.ಎಸ್.ದಿನೇಶ್ , ಕೋರ್ಸ್ ಕೋ-ಆರ್ಡಿನೇಟರ್ಸ್‌ಗಳಾದ ಆಂಗ್ಲ ವಿಭಾಗದ ಮುಖ್ಯಸ್ಥ ಕೆ.ಎನ್.ರಮೇಶ್, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಜೆ ಶಿವರಾಜ್‌ಕುಮಾರ್ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.