ನಾಳೆ ಹಡಪದ ಅಪ್ಪಣ್ಣ ಜಯಂತ್ಯುತ್ಸವ

IMG-20231001-WA0021.jpg
Published on

ದಾವಣಗೆರೆ: ನಗರದ ಶಿವಯೋಗಿ ಮಂದಿರದಲ್ಲಿ ಅ.3ರಂದು ಶಿವಶರಣ ಹಡಪದ ಅಪ್ಪಣ್ಣ ಅವರ 889ನೇ ಜಯಂತ್ಯುತ್ಸವ ಹಾಗೂ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದೆ.

ಸಮಾಜ ಸಂಘಟನೆಯ ಭಾಗವಾಗಿ ಸಮಾವೇಶ ನಡೆಯಲಿದೆ. ಸಮುದಾಯ ಭವನ ನಿರ್ಮಾಣ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಕಾರ್ಯಕ್ರಮದ ಮೂಲಕ ಒತ್ತಾಯಿಸಲಾಗುವುದು ಎಂದು ತಂಗಡಗಿ ಮಠದ ಶ್ರೀ ಅನ್ನದಾನ ಭಾರತಿ ಹಡಪದ ಅಪ್ಪಣ್ಣ ಸ್ವಾಮೀಜಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಬೆಳಗ್ಗೆ 11ಕ್ಕೆ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು.

ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ, ಬಸವ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಬಸವ ಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಶಾಸಕರಾದ ಕೆ.ಎಸ್.ಬಸವಂತಪ್ಪ, ವಿಜಯಾನಂದ ಕಾಶಪ್ಪನವರ್, ಬಸವರಾಜ್ ಶಿವಗಂಗಾ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ರೈತ ಮುಖಂಡ ತೇಜಸ್ವಿ ಪಟೇಲ್, ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಮ. ಹಡಪದ್ ಇತರರು ಭಾಗವಹಿಸುವರು.

ಮಧ್ಯಾಹ್ನ 1ಕ್ಕೆ ಬಸವ ಕಲಾಲೋಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಾಟಕ ಮತ್ತು ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಶಶಿಧರ ಬಸಾಪುರ, ಬಾಡ ರುದ್ರೇಶ್, ಸಾಹಿತಿ ಎನ್.ಜೆ. ಶಿವಕುಮಾರ್ ಇದ್ದರು.

--

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net