ನಾಳೆ ಹಳಿಂಗಳಿಯಲ್ಲಿ ರಾಷ್ಟ್ರಮಟ್ಟದ ಕುಸ್ತಿ

05
Published on

ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ರಬಕವಿ-&ಬನಹಟ್ಟಿ ತಾಲೂಕಿನ ಹಳಿಂಗಳಿಯಲ್ಲಿ ರಾಮಲಿಂಗೇಶ್ವರ ಜಾತ್ರೆ ಮಹೋತ್ಸವ ಅಂಗವಾಗಿ ಆ.9ರಂದು ಮಧ್ಯಾಹ್ನ 3ಕ್ಕೆ ರಾಷ್ಟ್ರಮಟ್ಟದ ಜಂಗೀ ನಿಖಾಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಟಕ ದೇವಲ ಸರ್ಕಾರ ದೇಸಾಯಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಸಿ ಕ್ರೀಡೆ ಕುಸ್ತಿ ಕುರಿತಾಗಿ ಯುವಪೀಳಿಗೆಯನ್ನು ಆಕರ್ಷಿಸಲು ಗ್ರಾಮೀಣ ಭಾಗದಲ್ಲಿ ದೊಡ್ಡಮಟ್ಟದಲ್ಲಿ ಟೂರ್ನಿ ಆಯೋಜಿಸಲಾಗುತ್ತಿದೆ.

100 ಜೋಡಿ ಕುಸ್ತಿಪಟು ಭಾಗವಹಿಸಲಿದ್ದಾರೆ. ಈ ಪೈಕಿ ಪಂಜಾಬ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿ ವಿವಿಧ ರಾಜ್ಯಗಳ ರಾಷ್ಟ್ರಮಟ್ಟದ 20 ಕುಸ್ತಿಪಟುಗಳು ಸೆಣಸಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಬೆಳಗಾವಿಯ ಮಹಾವೀರ ವ್ಯಾಯಾಮ ಶಾಲೆ ಮುಖ್ಯಸ್ಥ ಮಹಾವೀರ ಜಕನೂರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net