ನಾಳೆ ಹಿಮ್ಸ್ ಸಭಾಂಗಣದಲ್ಲಿ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ

ನಾಳೆ ಹಿಮ್ಸ್ ಸಭಾಂಗಣದಲ್ಲಿ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ
Published on

ಹಾಸನ: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 4ನೇ ಮಹಡಿಯ ಸಭಾಂಗಣದಲ್ಲಿ ನ. 30ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕಾನೂನು ಅರಿವು ಹಾಗು ಜಾಗೃತಿ ಕಾರ್ಯಕ್ರಮ ಹಮಿಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಡಿ.ಎಂ.ಅಕ್ಷಯ್ ಗೌಡ ಅವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಶ್ರೇಯಸ್ ಪಟೇಲ್ ಪಾಲ್ಗೊಳ್ಳುವರು. ಶಾಸಕ ಎಚ್.ಪಿ.ಸ್ವರೂಪ್ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಮಿಕ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮೊಹಮದ್ ಸುಜೀತಾ ಹಾಗು ಇತರರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಟಿಯಲ್ಲಿ ನೌಕರರ ಸಂಘದ ಶೋಭಾ, ಪ್ರಸಾದ್, ಲೋಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net