ಕೊಳ್ಳೇಗಾಲ: ಕೊಳ್ಳೇಗಾಲದಲ್ಲಿ ಮಾನಸೋತ್ಸವ-2024 ಹಾಗೂ ಮಾನಸ ಪ್ರಶಸ್ತಿ ಪ್ರದಾನ ಸಮಾರಂಭ ಜ.3ರಿಂದ 5ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.
ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿರ್ದೇಶಕ ಪಿ. ಶೇಷಾದ್ರಿ ಅವರು ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ಮಾನಸ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಮೈ.ವಿ.ವಿ. ಪ್ರಾಚ್ಯವಿದ್ಯಾ ಸಂಶೋಧನಾಲಯ ವಿಶ್ರಾಂತ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಮಾನಸ ಸಾಂಸ್ಕೃತಿಕ ವೈಭವ ನಡೆಯಲಿದೆ. 3 ಗಂಟೆಗೆ ನಿಸರ್ಗ ವಿದ್ಯಾನಿಕೇತನ ಶಾಲಾ ವಾರ್ಷಿಕೋತ್ಸವ ನಡೆಯಲಿದೆ. ಡಿಡಿಪಿಐ ರಾಮಚಂದ್ರ ಅರಸ್ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ಸಿ.ಎಸ್.ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ಸದಸ್ಯೆ ಸಿರೀಶ ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಶಾಸಕ ಎಸ್.ಬಾಲರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ.
ಜ.4 ರಂದು ಬೆಳಗ್ಗೆ 9 ಗಂಟೆಗೆ ಸಾಂಸ್ಕೃತಿಕ ಬೆಳಗು, 10 ಗಂಟೆಗೆ ವಾಟಾಳು ಸೂರ್ಯ ಸಿಂಹಾಸನ ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಕುಂದೂರು ಮಠದ ಶ್ರೀ ಶರತ್‌ಚಂದ್ರ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಚಾಮರಾಜನಗರ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್, ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ ರಘು, ಉಪವಿಭಾಗಾಧಿಕಾರಿ ಆರ್.ಮಹೇಶ್, ಡಿವೈಎಸ್ಪಿ ಎಂ.ಧಮೇರ್ಂದ್ರ, ನಗರಸಭೆ ಪೌರಾಯುಕ್ತ ಎ.ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಾಜಿ ಸಚಿವ ಎಸ್.ಮಹೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಗಂಟೆಗೆ ಮಾನಸ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದೆ. ಸಂಜೆ 7.30 ಕ್ಕೆ ನಗೆಹಬ್ಬ ಕಾರ್ಯಕ್ರಮ ನಡೆಯಲಿದ್ದು. ಮಿಮಿಕ್ರಿ ಗೋಪಿ, ಕಲರ್ಸ್ ಕನ್ನಡ ಗಿಚ್ಚಿ ಗಿಲಿಗಿಲಿ ಮತ್ತು ಜೀ ಕನ್ನಡ ಕಾಮಿಡಿಗಳು ತಂಡ ಭಾಗವಹಿಸಲಿದ್ದಾರೆ. ಡಿ.5 ರಂದು ಬೆಳಗ್ಗೆ 9 ಗಂಟೆಗೆ ಸಾಂಸ್ಕೃತಿಕ ಬೆಳಗು ಕಾರ್ಯಕ್ರಮ, 10.30ಕ್ಕೆ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಶ್ರೀ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಡಾ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ನೆರವೇರಲಿದೆ. ಮೈಸೂರು ವಿವಿ ಕುಲಪತಿ ಎನ್.ಕೆ. ಲೋಕನಾಥ್ ಸಾಧಕರಿಗೆ ಸನ್ಮಾನ ಮಾಡಲಿದ್ದಾರೆ. ಚಾಮರಾಜನಗರ ವಿಶ್ವವಿದ್ಯಾನಿಲಯ ಕುಲಪತಿ ಎಂ.ಆರ್.ಗಂಗಾಧರ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಾಸಕ ಎ.ಆರ್.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಲೆ ಮಹದೇಶ್ವರ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ.ಜಿ.ಸಂತೋಷ್ ಕುಮಾರ್‌ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭ: 5ರಂದು ಮಧ್ಯಾಹ್ನ 3ಗಂಟೆಗೆ ಮಾನಸೋತ್ಸವ- 2024 ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ತಾಲೂಕಿನ ಜೇತವನದ ಬೌದ್ಧ ಬಿಕ್ಖು ಶ್ರೀ ಮನೋರಕ್ಖಿತ ಬಂತೇಜಿ ಸಾನಿಧ್ಯ ವಹಿಸಲಿದ್ದಾರೆ. ಮೈಸೂರಿನ ವಿ.ವಿ. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಡಿಡಿಪಿಯು ಸಿ.ಮಂಜುನಾಥ ಪ್ರಸನ್ನ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ನಟ ರಿಷಿ ಭಾಗವಹಿಸಲಿದ್ದಾರೆ. ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು ಎಂದು ಮಾನಸ ಶಿಕ್ಷ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.