ಗುಂಡ್ಲುಪೇಟೆ: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜ.20 ರಿಂದ24ರವರೆಗೆ ಐದು ದಿನಗಳ ಕಾಲ ಅಸ್ಪಶ್ಯತಾ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಜ. 20ರಂದು ಬೆಳಗ್ಗೆ 10 ಗಂಟೆಗೆ ತಾಲೂಕಿನ ಬೇಗೂರು ಗ್ರಾಮ, 21ರಂದು ಬಾಚಹಳ್ಳಿ ಗ್ರಾಮ, 22ರಂದು ಕುಂದಕೆರೆ, 23ರಂದು ತೆರಕಣಾಂಬಿ ಹಾಗೂ 24ರಂದು ಹಂಗಳ ಗ್ರಾಮದಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆ, ಗ್ರಾಮಪಂಚಾಯಿತಿ ಅಧಿಕಾರಿಗಳು, ಸದಸ್ಯರು ಹಾಗೂ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.