ಅ.15ರಿಂದ 17ರ ವರೆಗೆ ಕುಸ್ತಿ ಪಂದ್ಯಾವಳಿ - ಎಂ.ಎಂ. ಕಾಂಬಳೆ

12456
Published on

ಖಾನಾಪುರ: ಸ್ಥಳೀಯ ಶಾಂತಿನಿಕೇತನ ಪಿಯು ಕಾಲೇಜು ಆವರಣದಲ್ಲಿ ಅ.15ರಿಂದ 17ರ ವರೆಗೆ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ. ಕಾಂಬಳೆ ಹೇಳಿದರು.

ಶಾಂತಿನಿಕೇತನ ಕಾಲೇಜಿನ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ 31 ಜಿಲ್ಲೆಗಳ 940ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಚಿವ ಮಧು ಬಂಗಾರಪ್ಪ ಸೇರಿ ಜಿಲ್ಲೆಯ ಶಾಸಕರು, ಸಂಸದರು, ಗಣ್ಯರು ಉಪಸ್ಥಿತರಿರಲಿದ್ದಾರೆ. ಶಾಸಕ ವಿಠ್ಠಲ್ ಹಲಗೇಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಶಾಸಕ ವಿಠ್ಠಲ ಹಲಗೇಕರ್ ಮಾತನಾಡಿ, ಶಾಂತಿನಿಕೇತನ ಪಿಯು ಕಾಲೇಜ್ ವತಿಯಿಂದ 2016ರಲ್ಲಿ ಜಿಲ್ಲಾಮಟ್ಟದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿಸಲಾಗಿತ್ತು. ಕುಸ್ತಿ ಗ್ರಾಮೀಣ ಕ್ರೀಡೆಯಾಗಿದ್ದು ಪ್ರೋತ್ಸಾಹ ನೀಡುವ ಉದ್ದೇಶದಿಂದ ನಮ್ಮ ಕಾಲೇಜಿನಲ್ಲಿ ರಾಜ್ಯಮಟ್ಟದ ಪಂದ್ಯಾವಳಿ ಆಯೋಜಿಸಲಾಗಿದೆ. ಕುಸ್ತಿಪಟುಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಶಾಂತಿನಿಕೇತನ ಕಾಲೇಜು ಹಾಗೂ ತೋಪಿನಕಟ್ಟಿ ಮಹಾಲಕ್ಷ್ಮೀ ಗ್ರೂಪ್ ಎಜುಕೇಶನ್ ಸಂಸ್ಥೆ ಪ್ರಾಯೋಜಕತ್ವ ವಹಿಸಿಕೊಂಡಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net