ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಚಾಣಕ್ಯ ವಿದ್ಯಾಸಂಸ್ಥೆಯಲ್ಲಿ ಜ.17ರಿಂದ ಎರಡು ದಿನಗಳ ಕಾಲ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ.
17ರಂದು ಪಾಲಕರು ಹಾಗೂ ವಿದ್ಯಾರ್ಥಿಗಳ ಕ್ರೀಡೆಯಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಮಕ್ಕಳ ಸಂತೆ ಆಯೋಜಿಸಲಾಗಿದೆ. ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರವಿಚಂದ್ರ, ಶಿಕ್ಷಣ ಸಂಯೋಜಕರಾದ ಸಿ.ಕೆ ಗಣೇಶ್, ಸೋಮಶೇಖರ್, ಸತೀಶ್ ಕುಮಾರ್, ಕೆ.ಎಂ ಸ್ವಾಮಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕೆ.ಬಿ.ಚಂದ್ರಶೇಖರ್ ಭಾಗವಹಿಸುವರು. 18ರಂದು ಶಾಲಾ ವಸಂತೋತ್ಸವ ಕಾರ್ಯಕ್ರಮ ನಡೆಯಲಿದ್ದು, ಹಾಸ್ಯನಟ ಶಿವರಾಜು ಕೆ.ಆರ್.ಪೇಟೆ, ಸಚಿವ ಕೆ.ವೆಂಕಟೇಶ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಕೆ.ವಿವೇಕಾನಂದ, ಮಾಜಿ ಶಾಸಕ ಕೆ.ಮಹದೇವ್, ನಿವೃತ್ತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಬಿಇಒ ರವಿಪ್ರಸನ್ನ, ಸಬ್ ಇನ್‌ಸ್ಪೆಕ್ಟರ್ ಶಿವಶಂಕರ್, ಸೆಸ್ಕ್ ಎಇಇ ಲಕ್ಷ್ಮೀಶ್ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.