ನಾಳೆಯಿಂದ ಮತ್ತೆ ದೇವೇಗೌಡರ ಜಿಲ್ಲಾ ಪ್ರವಾಸ

ನಾಳೆಯಿಂದ ಮತ್ತೆ ದೇವೇಗೌಡರ ಜಿಲ್ಲಾ ಪ್ರವಾಸ
Published on

ಹಾಸನ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರದಾನಿ ಎಚ್.ಡಿ. ದೇವೇಗೌಡರು ನೇತೃತ್ವದಲ್ಲಿ ಜ.24ರಂದು ಚನ್ನರಾಯಪಟ್ಟಣದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನ ಸಂಘಟಿಸುವ ದೃಷ್ಟಿಯಿಂದ ಮತ್ತು ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಪಕ್ಷದ ವರಿಷ್ಠರಾದ ದೇವೇಗೌಡರು ಸಂಜೆ 3:30ಕ್ಕೆ ಪಟ್ಟಣದ ಸಾವಿತ್ರಿ ಕರಿಯಯ್ಯ ಕಲ್ಯಾಣ ಮಂಟಪದಲ್ಲಿ ಸಭೆ ಕರೆಯಲಾಗಿದ್ದು ಚುನಾಯಿತ ಜನಪ್ರತಿನಿಧಿಗಳು ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು
ಜ. 25ರಂದು ಬೆಳಗ್ಗೆ 10 ಗಂಟೆಗೆ ಆಲೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಮುಖಂಡರ ಸಭೆ ಕರೆಯಲಾಗಿದ್ದು, ನಂತರ ಮಧ್ಯಾಹ್ನ ಸಕಲೇಶಪುರದಲ್ಲಿ ಸಭೆ ಏರ್ಪಡಿಸಲಾಗಿದೆ. ಈ ಸಭೆಗೆ ಮಾಜಿ ಸಚಿವ ಎಚ್ ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ,್ಣ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಸಿ.ಎನ್. ಬಾಲಕೃಷ್ಣ, ಎಚ್.ಪಿ. ಸ್ವರೂಪ್, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ, ಜೆಡಿಎಸ್‌ನ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net