

ಹಾಸನ: ಮುಂಬರುವ ಲೋಕಾಸಭೆ ಚುನಾವಣೆಯ ಹಿನ್ನಲೆಯಲ್ಲಿ ಜ.18 ಮತ್ತು 19 ರಂದು ಎರಡು ದಿನ ಬೇಲೂರು, ಹಾಸನ ಮತ್ತು ಅರಸೀಕೆರೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ ತಿಳಿಸಿದರು.
ಇಂದು ಬೇಲೂರಿನಲ್ಲಿ ಮದ್ಯಾಹ್ನ 3ಗಂಟೆಗೆ ಪಟ್ಟಣದ ಶ್ರೀ ಚನ್ನಕೇಶವ ದೇವಾಲಯದ ಮುಂಬಾಗ ನಂತರ ಸಂಜೆ 6 ಗಂಟೆಗೆ ನಗರದ ಸಂಸದರ ನಿವಾಸದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಚಟುವಟಿಕೆಗಳು ಮತ್ತು ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಾಗುವು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಜ 19 ಶುಕ್ರವಾರದಂದು 11 ಗಂಟೆಗೆ ಅರಸೀಕೆರೆಯಲ್ಲಿ ನಮ್ಮ ಪಕ್ಷದ ಮುಖಂಡ ಸಂತೋಷ್ ಅವರ ಮನೆ ಮುಂಬಾಗ ಪಕ್ಷದ ಪದಾಧಿಕಾರಿಗಳು, ಪ್ರಮುಖ ಕಾರ್ಯಕರ್ತರು ಹಾಗೂ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಾಜಿ ಶಾಸಕರು, ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಮಾಜಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿಯ ಎಲ್ಲಾ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಭೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ, ಶಾಸಕ ಎಚ್.ಪಿ. ಸ್ವರೂಪ್, ಮಾಜಿ ಶಾಸಕ ಕೆ.ಎಸ್. ಲಿಂಗೇಶ್, ಕೆ.ಎಂ. ರಾಜೇಗೌಡ, ಸೇರಿದಂತೆ ಇತರರು ಪಾಲ್ಗೊಳ್ಳುವುದಾಗಿ ತಿಳಿಸದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರ ಹೊಂಗೆರೆ ರಘು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವನಂಜಪ್ಪ, ವಕೀಲ ಶೇಷಾದ್ರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮೇಗೌಡ (ಪಾಪಣ್ಣ), ನಗರಸಬೆ ಮಾಜಿ ಅಧ್ಯಕ್ಷ ಸಯ್ಯದ್ ಅಕ್ಬರ್ ಇತರರು ಇದ್ದರು.