ನಿಖಿಲ್ ಸೇರಿ ಮೂರು ಕ್ಷೇತ್ರಗಳಲ್ಲಿ ಗೆಲುವು:ಪ್ರತಾಪ್ ಸಿಂಹ

ನಿಖಿಲ್ ಸೇರಿ ಮೂರು ಕ್ಷೇತ್ರಗಳಲ್ಲಿ ಗೆಲುವು:ಪ್ರತಾಪ್ ಸಿಂಹ
Published on

ಹಾಸನ: ರಾಜ್ಯದಲ್ಲಿ ಮೂರು ಕಡೆ ಉಪಚುನಾವಣೆ ನಡೆಯುತ್ತಿದ್ದು, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂರು ಕಡೆಯಲ್ಲೂ ನಮ್ಮ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಹಾಸನಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ, ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಅವರು ಗೆಲುವು ಸಾಧಿಸುತ್ತಾರೆ. ನಾನು ಎಲ್ಲಾ ಕಡೆ ಪ್ರಚಾರಕ್ಕೆ ಹೋಗುತ್ತೇನೆ. ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಒಳ್ಳೆಯ ವಾತಾವರಣವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಾಸನಾಂಬೆ ದೇವಿಯ ದರ್ಶನವನ್ನು ಪ್ರತಿ ವರ್ಷವೂ ಕೂಡ ಪಡೆಯುತ್ತೇನೆ. ಲಕ್ಷಾಂತರ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ, ಇದು ಜನ ತಾಯಿಯ ಮೇಲೆ ಇಟ್ಟಿರುವ ನಿಷ್ಠೆ ಮತ್ತು ಶ್ರದ್ದೆಗೆ ಇರುವ ಜ್ಯೋತಕವಾಗಿದೆ. ತಾಯಿ ಎಲ್ಲಾ ಧರ್ಮ ನಿಷ್ಠರನ್ನ ಕಾಪಾಡಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net