ನಿಗದಿತ ಅವಧಿಯಲ್ಲಿ ಕೆಲಸ ಮುಗಿಸಿ

25manju9-Web
ಬೆಳಗಾವಿ ನಗರದ ತಾಪಂ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು. ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಬೆಳಗಾವಿ ಎಸಿ ರವೀಂದ್ರ ಕರಲಿಂಗಣ್ಣವರ, ತಹಸೀಲ್ದಾರ್ ಆರ್.ಕೆ. ಕುಲಕರ್ಣಿ ಇದ್ದರು.
Published on

ಬೆಳಗಾವಿ: ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಅನುದಾನ ಬಳಸಬೇಕು. ನಿಗದಿತ ಸಮಯದಲ್ಲಿಯೇ ಎಲ್ಲ ಕಾಮಗಾರಿ ಮುಗಿಯಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ, ಚರಂಡಿ ನಿರ್ಮಾಣ ಸೇರಿ ಎಲ್ಲ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಸಾರ್ವಜನಿಕರಿಂದ ದೂರುಗಳು ಕೇಳಿಬಂದರೆ ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಬಳಿಕ ಜಲ ಜೀವನ ಮಿಷನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, 14ನೇ ಮತ್ತು 15ನೇ ಹಣಕಾಸು ಯೋಜನೆ, ವಿವಿಧ ವಸತಿ ಯೋಜನೆಗಳು, ಸ್ವಚ್ಛ ಭಾರತ್ ಮಿಷನ್, ಗ್ರಾಮ ಪಂಚಾಯಿತಿ ಮನೆ ಕರ ಮತ್ತು ನೀರಿನ ಕರ ವಸೂಲಿ, ಗ್ರಾಮ ಪಂಚಾಯಿತಿಯಲ್ಲಿ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳು ಅನುಷ್ಠಾನದ ಕುರಿತು ಮಾಹಿತಿ ಪಡೆದರು.ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಬೆಳಗಾವಿ ಎಸಿ ರವೀಂದ್ರ ಕರಲಿಂಗಣ್ಣವರ, ತಹಸೀಲ್ದಾರ್ ಆರ್.ಕೆ. ಕುಲಕರ್ಣಿ, ತಾಪಂ, ಗ್ರಾಪಂ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net