ನಿಗದಿತ ಗುರಿ ತಲುಪಲು ಕಾರ್ಯ ಯೋಜನೆ ರೂಪಿಸಿ

17-08-Shiva-3
ರಾಯಚೂರಿನ ಕೃಷಿ ವಿಜ್ಞಾನಗಳ ವಿವಿ ಪ್ರವಾಸಿ ಮಂದಿರದಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವ ಎನ್.ಎಸ್.ಬೋಸರಾಜು ಗುರುವಾರ ಜಿಲ್ಲೆಯ ಅಭಿವೃದ್ಧಿ ಕುರಿತು ಅಕಾರಿಗಳ ಸಭೆ ನಡೆಸಿದರು. ಜಲಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಬೋಧ ಯಾದವ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್, ಕೃಷಿ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಇದ್ದರು.
Published on

ರಾಯಚೂರು: ಜಿಲ್ಲೆಗೆ ಅಂಟಿರುವ ಹಿಂದುಳಿದ ಹಣೆಪಟ್ಟಿಯನ್ನು ತೊಲಗಿಸಲು ಜಲಶಕ್ತಿ ಅಭಿಯಾನ, ಅಪೌಷ್ಠಿಕತೆ ನಿವಾರಣೆ, ಸಮರ್ಪಕ ಶುದ್ಧ ಕುಡಿಯುವ ನೀರು ಸರಬರಾಜು, ನೀರಿನ ಸಂರಕ್ಷಣೆ ನಿಟ್ಟಿನಲ್ಲಿ ನಿಗದಿತ ಗುರಿ ತಲುಪಲು ಕಾರ್ಯ ಯೋಜನೆ ರೂಪಿಸುವಂತೆ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಅಕಾರಿಗಳಿಗೆ ತಿಳಿಸಿದರು.
ನಗರದ ಕೃಷಿ ವಿಜ್ಞಾನಗಳ ವಿವಿ ಪ್ರವಾಸಿ ಮಂದಿರದಲ್ಲಿ ಜಲಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಬೋಧ ಯಾದವ ಹಾಗೂ ಜಿಲ್ಲಾ ಮಟ್ಟದ ಅಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಸಾಧಕ ಬಾಧಕಗಳ ಕುರಿತು ಚರ್ಚಿಸಿದರು.
ರಾಯಚೂರು ಜಿಲ್ಲೆ ಎಂ ತಕ್ಷಣ ಅಪೌಷ್ಠಿಕತೆ ನೆನಪಿಗೆ ಬರುತ್ತದೆ. ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು ಸೇರಿದಂತೆ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್, ಕೃಷಿ ವಿವಿ ಕುಲಪತಿ ಡಾ.ಎಂ.ಹನುಮಂತಪ್ಪ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net