ನಿಗದಿತ ಸಮಯಕ್ಕೆ ಸಮೀಕ್ಷೆ ಪೂರ್ಣಗೊಳಿಸಿ

IMG-20250929-WA0080
Published on

ಚಾಮರಾಜನಗರ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ, ಮುಳ್ಳೂರು ಮತ್ತು ಹರಳೆ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಮೀಕ್ಷಾ ಕಾರ್ಯವನ್ನು ಮಂಗಳವಾರ ಖುದ್ದು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯತಿಗಳಿಗೆ ಭೇಟಿ ಕೊಟ್ಟು ಸಮೀಕ್ಷಾ ಕೆಲಸವನ್ನು ವೀಕ್ಷಣೆ ಮಾಡಿದರು.

ಸಮೀಕ್ಷಕರು ಅವರಿಗೆ ನಿಗದಿ ಪಡಿಸಿರುವ ಗುರಿಯನ್ನು ಸಾಧಿಸಬೇಕು. ಒಂದು ವೇಳೆ ತಾಂತ್ರಿಕ ದೋಷಗಳು ಕಂಡು ಬಂದರೆ ತಾಂತ್ರಿಕ ಸಮಾಲೋಚಕರನ್ನು ಸಂಪರ್ಕಿಸಬೇಕು ಎಂದು ಹೇಳಿದರು. ಸಾರ್ವಜನಿಕರಿಂದ ಪ್ರಶ್ನಾವಳಿ ಮೂಲಕ ಸಮರ್ಪಕವಾಗಿ ಸಮೀಕ್ಷೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಇದೇ ವೇಳೆ ಸ್ವ ಸಹಾಯ ಸಂಘದ ಮಹಿಳೆಯರು ಸಮೀಕ್ಷೆಯ ಬಗ್ಗೆ ಅರಿವು ಮೂಡಿಸುತ್ತಿದ್ದ ಕಾರ್ಯವನ್ನು ಸಹ ವೀಕ್ಷಿಸಿದರು. ಗ್ರಾಮ ಪಂಚಾಯಿತಿಯ ದಿನ ನಿತ್ಯದ ಕಾರ್ಯವೈಖರಿ ಪರಿಶೀಲಿಸಿದರು.

ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಕಸ ಸಂಗ್ರಹಣೆಯನ್ನು ಸರಿಯಾದ ಕ್ರಮದಲ್ಲಿ ನಿರ್ವಹಣೆ ಮಾಡುವಂತೆ ಮತ್ತು ಎನ್.ಆರ್.ಎಲ್.ಎಂ ಸಂಘದ ಮಹಿಳೆಯರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡುವಂತೆ ತಿಳಿಸಿದರು.

ಮುಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಸರಿಯಾದ ಸಮಯಕ್ಕೆ ನೀರು ಬರುತ್ತದೆಯೇ ಎಂದು ಪರಿಶೀಲಿಸಿದರು. ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಎಸ್.ಬಿ.ಎಂ ಸಮಾಲೋಚಕರು ಮತ್ತು ಎನ್.ಆರ್.ಎಲ್.ಎಂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net