

ಬಾಗಲಕೋಟೆ: ರಾಜ್ಯ ಕಂಡ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಹಾಗೂ ದೇಶದ ಶ್ರೇಷ್ಠ ಅಹಿಂದ ನೇತಾರ ಸನ್ಮಾನ್ಯ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವ ಮಟ್ಟಕ್ಕೆ ಇಳಿದಿದ್ದು ನಿಜಕ್ಕೂ ಅಸಂವಿಧಾನಿಕ. ಬಿಜೆಪಿ ಮತ್ತು ಮಿತ್ರಪಕ್ಷದ ಬಗೆದಷ್ಟು ಲೆಕ್ಕ ಹಾಕದಷ್ಟು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಇದ್ದು, ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ರಾಜ್ಯಪಾಲರು ಸಿದ್ದರಾಮಯ್ಯ ನವರ ವಿಚಾರದಲ್ಲಿ ಮಾತ್ರ ತಮ್ಮ ಮಂತ್ರದಂಡವನ್ನು ಉಪಯೋಗಿಸಿ ಹೇಗಾದರೂ ಮಾಡಿ ಈ ಜನಪರ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಬೇಕೆಂದು ಹೊರಟಿರುವುದು ಕಾನೂನು ಬಾಹಿರವಾಗಿದ್ದು, ಇದು ನಮ್ಮ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ನಾಶ ಮಾಡುವ ಪ್ರಯತ್ನವಾಗಿದೆ ಎಂದು ರಾಜ್ಯಪಾಲರ ನಿಲುವನ್ನು ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾದ ನಾಗರಾಜ ಹದ್ಲಿ ಖಂಡಿಸಿದ್ದಾರೆ.