ನಿಪ್ಪಾಣಿಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನಾಳೆ

web5
ಚನ್ನಮ್ಮ ಕಿತ್ತೂರಿನಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ರೋಹಿಣಿ ಪಾಟೀಲ, ಬಸವರಾಜ ಚಿನಗುಡಿ, ದೊಡ್ಡಗೌಡ ಹುಚ್ಚಗೌಡರ ಇತರರು ಇದ್ದರು.
Published on

ಚನ್ನಮ್ಮ ಕಿತ್ತೂರು: ನಿಪ್ಪಾಣಿಯಲ್ಲಿ ಸೆ.10ರಂದು ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ 2ಎ ಮೀಸಲಾತಿ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣ ಸಮೀಪದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮೀಸಲಾತಿ ಹೋರಾಟದಿಂದ ಲಿಂಗಾಯತ ಪಂಚಮಸಾಲಿ ಸಮುದಾಯದ ಸ್ವಾಭಿಮಾನ ಮತ್ತು ಆತ್ಮವಿಶ್ವಾಸ ಹೆಚ್ಚಾಗಿದೆ. ರಾಜಕೀಯವಾಗಿ ಹಾಗೂ ಸಾಮಾಜಿಕವಾಗಿ ನೆಲೆ ಕಂಡುಕೊಂಡಿದ್ದು, ವಿವಿಧ ರಂಗಗಳಲ್ಲಿ ನಮ್ಮ ಸಮುದಾಯದ ಮುಖಂಡರನ್ನು ಗುರುತಿಸುವ ಕಾರ್ಯಗಳು ಆಗುತ್ತಿವೆ ಎಂದರು.

ಲಿಂಗಾಯತ ಪಂಚಮಸಾಲಿ ಸಮುದಾಯದ ತಾಲೂಕು ಘಟಕದ ಅಧ್ಯಕ್ಷ ಡಿ.ಆರ್.ಪಾಟೀಲ ಮಾತನಾಡಿ, ಸೆ.10ರಂದು ಬೆಳಗ್ಗೆ 10 ಗಂಟೆಗೆ ನಿಪ್ಪಾಣಿಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮೂಲಕ ಮೀಸಲಾತಿ ಹೋರಾಟಕ್ಕೆ ಚಾಲನೆ ನೀಡಲಾಗುವುದು. ಸಹಸ್ರ ಸಂಖ್ಯೆಯಲ್ಲಿ ಸಮುದಾಯದವರು ಭಾಗವಹಿಸಬೇಕು ಎಂದು ಕರೆ ನೀಡಿದರು. ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಮಾತನಾಡಿ, ಅಧಿಕಾರ ಇಂದು ಬರಬಹುದು, ನಾಳೆ ಹೋಗಬಹುದು. ನಾವು ಯಾವತ್ತೂ ಸಮುದಾಯದ ಏಳಿಗೆಗಾಗಿ ಶ್ರೀಗಳ ಬೆನ್ನೆಲುಬಾಗಿ ನಿಲ್ಲುತ್ತೇವೆ ಎಂದರು. ಉದ್ಯಮಿಗಳಾದ ಚಂದ್ರಗೌಡ ಪಾಟೀಲ, ನಿಂಗನಗೌಡ ಪಾಟೀಲ ಮಾತನಾಡಿದರು.

ಕಿತ್ತೂರು ತಾಲೂಕು ಪಂಚಮಸಾಲಿ ಸಮುದಾಯದ ಯುವ ಘಟಕದ ಅಧ್ಯಕ್ಷ ಬಸವರಾಜ ಚಿನಗುಡಿ, ಪಂಚಸೇನಾ ಅಧ್ಯಕ್ಷ ದೊಡ್ಡಗೌಡ ಹುಚ್ಚಗೌಡರ, ಶಂಕರ ಹೊಳಿ, ಚಿಂತು ಮರಡಿ, ಮಂಜುಳಾ ಕಾಪ್ಸೆ, ವಿನಾಯಕ ಮರಡಿ, ಮುದಕಪ್ಪ ಮರಡಿ, ನಿಂಗಪ್ಪ ಕೂಗಟಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net