ನಿಮಗೆ ಅಕ್ಕಿ ಹಣ ಜಮಾ ಆಗಿದೆಯೇ ಎಂಬುದನ್ನು ಹೀಗೆ ನೋಡಿ

retion-card-and-amount.
Published on

ಕಾರವಾರ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ(ಬಿಪಿಎಲ್‌) ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಹಣ ಜಮಾ ಆಗಿದೆ
ಪ್ರತಿ ಕೆಜಿಗೆ 34 ರೂ.ನಂತೆ ಒಬ್ಬ ಸದಸ್ಯನಿಗೆ 170 ರೂ. ಕುಟುಂಬದ ಮುಖ್ಯಸ್ಥನ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 16,285 ಅಂತ್ಯೋದಯ ಪಡಿತರ ಚೀಟಿ ಚಾಲ್ತಿಯಲ್ಲಿದ್ದು ಹಾಗೂ 2,94,497 ಆದ್ಯತಾ ಪಡಿತರ ಚೀಟಿಗಳ ಪೈಕಿ ಬ್ಯಾಂಕ್ ಖಾತೆಗಳು ಸಕ್ರಿಯವಾಗಿದ್ದು, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಆಗಿರುವ 2,37,444 ಫಲಾನುಭವಿಗಳ ಖಾತೆಗೆ ಒಟ್ಟು14.32 ಕೋಟಿ ರೂಗಳನ್ನು ಜಮಾ ಮಾಡಲಾಗಿದೆ.

ಇದನ್ನೂ ಓದಿ: ಫಣಸಗುಳಿ ಕಿರುಸೇತುವೆ ಜಲಾವೃತ
ಹಣ ವರ್ಗಾವಣೆಯಾದ ಬಗ್ಗೆ ಹಾಗೂ ಇತರ ವಿವರಗಳನ್ನು ಇಲಾಖೆ ವೆಬ್‌ಸೈಟ್https://ahara.kar.nic.in/status2/status_of_dbt.aspx ಮೂಲಕ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net