

ವಿಜಯಪುರ: ಜಿಲ್ಲೆಯ ಜನತೆಗಾಗಿ ವಿಶೇಷ ಜಿಲ್ಲಾ ಮಟ್ಟದ ನಿಮ್ಮ ಮಂತ್ರಿ ಭೇಟಿಮಾಡಿ (ಮೀಟ್ ಯುವರ್ ಮಿನಿಸ್ಟರ್) ಕಾರ್ಯಕ್ರಮ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಏರ್ಪಡಿಸಲಾಗಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಸೂಚನೆಯ ಮೆರೆಗೆ ಜಿಲ್ಲಾಡಳಿತದಿಂದ ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಆಯೋಜಿಸಲಾಗುವುದು. ತಿಂಗಳಿಗೊಮ್ಮೆ ಜಿಲ್ಲೆಯ ಸಾರ್ವಜನಿಕರ ಕುಂದು-ಕೊರತೆ ಹಾಗೂ ಅಭಿವೃದ್ಧಿ ವಿಚಾರವಾಗಿ ತಮ್ಮನ್ನು ಭೇಟಿ ಮಾಡಬಹುದು. ಕಾರ್ಯಕ್ರಮ ನಡೆಯುವ ವಿಷಯವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.