

ತೇರದಾಳ: ಮಹಿಳೆ ಮತ್ತು ಮಕ್ಕಳ ರಕ್ಷಣೆ ಕಾಂಗ್ರೆಸ್ ಪಕ್ಷದ ಮೂಲ ಧ್ಯೇಯವಾಗಿದೆ. ನಿಮ್ಮ ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ ಎಂದು ಮಾಜಿ ಸಚಿವೆ ಉಮಾಶ್ರೀ ಮತದಾರರಿಗೆ ಭರವಸೆ ನೀಡಿದರು.
ಪಟ್ಟಣದ ದೇವರಾಜನಗರದ ವಾರ್ಡ್ ನಂ.3ರಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ವಾರ್ಡ್‌ನಲ್ಲಿ ಏನೇ ಸಮಸ್ಯೆಗಳಿದ್ದರೂ ನಾವು ಪರಿಹರಿಸುತ್ತೇವೆ. ನಾಗರಿಕರ ಹಿತಾಸಕ್ತಿಯನ್ನು ಕಾಯಲು ನಾವು ಬದ್ಧರಾಗಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ರಾಜೇಸಾಬ ನಗಾರ್ಜಿ ಅವರಿಗೆ ಮತ ನೀಡುವಂತೆ ಕೋರಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಂಜಯ್ಯನಮಠ, ತೇರದಾಳ ಬ್ಲಾಕ್ ಅಧ್ಯಕ್ಷ ಲಕ್ಷ್ಮ್ಮಣ ದೇಸಾರಟ್ಟಿ, ನಜೀರ ಕಂಗನೋಳಿ, ಪ್ರವೀಣ ನಾಡಗೌಡ, ಡಾ.ಪದ್ಮಜೀತ ನಾಡಗೌಡ ಇತರರಿದ್ದರು.