ನಿಮ್ಮಿಂದ ಸರ್ಕಾರ ನಡೆಸಲು ಆಗುತ್ತಿಲ್ಲ: ಡಿಕೆಶಿ

kpcc
Published on

ಹುಬ್ಬಳ್ಳಿ: ನಿಮ್ಮ ಕೈಯಲ್ಲಿ ಸರ್ಕಾರ ನಡೆಸಲು ಆಗುತ್ತಿಲ್ಲ. ಚುನಾವಣೆ ನಡೆಸೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೈತಿk ಪೋಲಿಸಗಿರಿಗೆ ಉತ್ತೇಜನ ನೀಡಿದ್ದರಿಂದ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಕಾರ್ಯಕರ್ತರು ಚರ್ಚ್​ಗಳಿಗೆ ತೆರಳಿ ಭಜನೆ ಮಾಡಿದ್ದರು. ಒಂದೇ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದು ರಾಜ್ಯಕ್ಕೆ ಕಳಂಕ ಮೆತ್ತಿದೆ ಎಂದರು.

ಯಾರೇ ಕೊಲೆ ಮಾಡಿರಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಕೊಲೆಯಾದವರಲ್ಲಿ ಒಂದು ಕೋಮಿನವರಿಗೆ ಪರಿಹಾರ ಘೊಷಣೆ ಮಾಡಿದ್ದಾರೆ. ಇನ್ನೊಂದು ಕೋಮಿನವರಿಗೂ ಪರಿಹಾರ ಕೊಡಬೇಕು. ಬಿಜೆಪಿ ಕಾರ್ಯಕರ್ತರೇ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ಗೃಹ ಸಚಿವರ ಮೆನೆಗೆ ಮುತ್ತಿಗೆ ಹಾಕಿದ್ದು ಎಂದರು.

ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಮಾಜಿ ಸಚಿವ ಸಂತೋಷ ಲಾಡ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net