ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಆಟೋ ಡಿಕ್ಕಿ; ವಿದ್ಯಾರ್ಥಿನಿಯರ ಕಾಲಿಗೆ ಪೆಟ್ಟು

AVT WEB
Published on

ಆನವಟ್ಟಿ: ಸಮೀಪದ ಸಮನವಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಆಟೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಚೈತ್ರಾ, ದೀಪಾ, ಸಂಗೀತಾ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮನವಳ್ಳಿಯಿಂದ ಆನವಟ್ಟಿಯ ಕೆಪಿಎಸ್ ಶಾಲೆಗೆ ಆಟೋದಲ್ಲಿ ಬರುವಾಗ, ಸಮನವಳ್ಳಿ ಕ್ರಾಸ್ ಬಳಿ ಆಟೋ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ವಿದ್ಯಾರ್ಥಿನಿಯರ ಕಾಲುಗಳಿಗೆ ಪೆಟ್ಟಾಗಿದ್ದು, ಆನವಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net