

ಗುಂಡ್ಲುಪೇಟೆ: ತಾಲೂಕಿನ ತೊಂಡವಾಡಿ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಗುರುವಾರ ಬೆಂಗಳೂರಿನಿಂದ ಪಟ್ಟಣದತ್ತ ಸಿಮೆಂಟ್ ಮೂಟೆಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ತೊಂಡವಾಡಿ ಗೇಟ್ ಸಮೀಪ ರಸ್ತೆಬದಿಯ ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಮಗುಚಿ ಬಿದ್ದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬೇಗೂರು ಠಾಣೆಯ ಪೊಲೀಸರು ಭೇಟಿ ನೀಡಿ, ಸಣ್ಣಪುಟ್ಟ ಗಾಯಳಾಗಿದ್ದ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು.