

ಚಿಕ್ಕಮಗಳೂರು
ಇತ್ತೀಚೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಕೆ.ಭರತ್, ಸರ್ಕಾರದ ವತಿಯಿಂದ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇನ್ನುಳಿದ ಇಲಾಖೆಗಳು ಒಗ್ಗೂಡಿಸಿಕೊಂಡು ಹಮ್ಮಿಕೊಂಡ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ನಿಯಾಮಾನುಸಾರ ನಡೆಯದೇ ಅಂಬೇಡ್ಕರ್ ಹಾಗೂ ಅವರ ಅನುಯಾಯಿಗಳಿಗೆ ಅವಮಾನ ಮಾಡಲಾಗಿದೆ ಎಂದು ದೂರಿದರು.
ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವ ಬಗ್ಗೆ ಜಿಲ್ಲಾಡಳಿತ ಪೂರ್ವ ಭಾವಿ ಸಭೆಗಳನ್ನು ನಡೆಸಿ, ಉಪನ್ಯಾಸ ನೀಡುವವರು ಯಾರು ಎಂದು ಸರಿಯಾದ ನಿರ್ಧಾರ ತೆಗೆದುಕೊಳ್ಳದೆ ಇದ್ದ ಕಾರಣ ಇಂತಹ ಅವಮಾನಕರ ಘಟನೆ ನಡೆದಿದೆ. ಇದಕ್ಕೆ ಸಂಬAಧಪಟ್ಟ ಇಲಾಖೆ ಹಾಗೂ ಜಿಲ್ಲಾಡಳಿತ ನೇರ ಹೊಣೆಯಾಗಿರುತ್ತದೆ ಎಂದು ಆರೋಪಿಸಿದರು.
ಸೂಕ್ಷö್ಮವಾದ ಕಾರ್ಯಕ್ರಮಗಳನ್ನು ನಡೆಸುವಾಗ ಕಾರ್ಯಕ್ರಮಗಳಲ್ಲಿ ಉಪನ್ಯಾಸ ಅಥವಾ ಮಾರ್ಗದರ್ಶನ ನೀಡುವವರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ನಿಷ್ಪಕ್ಷಪಾತವಾಗಿ ಆಯ್ಕೆ ಮಾಡಬೇಕು. ಆ ವ್ಯಕ್ತಿ ಯಾವುದೇ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿರಬಾರದು. ಉತ್ತಮ ಚಾರಿತ್ರö್ಯ ಉಳ್ಳವರು ಹಾಗೂ ವಿಷಯಗಳನ್ನು ಸುದೀರ್ಘವಾಗಿ ಅಧ್ಯಯನ ಮಾಡಿ ಅರ್ಥೈಸಿಕೊಂಡಿರುವವರನ್ನು ಜಿಲ್ಲಾಡಳಿತ ಆಯ್ಕೆ ಮಾಡಬೇಕು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳ ಪೂರ್ವಭಾವಿ ಸಭೆಗಳಿಗೆ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಸೂಕ್ತ ಸಲಹೆ ತೆಗೆದುಕೊಳ್ಳಬೇಕು. ಕಾರ್ಯಕ್ರಮಗಳಿಗೆ ೨ರಿಂದ ಮೇಲ್ಪಟ್ಟ ವ್ಯಕ್ತಿಗಳನ್ನು ಸೂಚಿಸಿದಲ್ಲಿ ಲಾಟರಿಯ ಮೂಲಕ ಎಲ್ಲರ ಸಮ್ಮುಖದಲ್ಲಿ ಆಯ್ಕೆ ಮಾಡಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಗಂಗಾಧರ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಸೋಮಶೇಖರ್, ಕಾಂಗ್ರೆಸ್ ಮುಖಂಡ ಬಿ.ಎಂ.ನಾಗೇಶ್ ಗೌಡ ಮತ್ತಿತರರಿದ್ದರು.