ನಿಯಮ ಉಲ್ಲಂಸಿದ ಶಾಲಾ ವಾಹನಕ್ಕೆ 45 ಸಾವಿರ ರೂ. ದಂಡ

3-4
Published on

ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 86 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು ಶುಕ್ರವಾರ ಕೇಸ್​ ದಾಖಲಿಸಿದ್ದಾರೆ.

ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಸಂಸ್ಥೆಗಳಿಗೆ ಸೇರಿದ 86 ವಾಹನಗಳ ವಿರುದ್ಧ 129 ಕೇಸ್​ ದಾಖಲಿಸಿ 45,800 ರೂ. ದಂಡ ವಿಧಿಸಲಾಗಿದೆ. ಮತ್ತೆ ಶಾಲಾ ವಾಹನಗಳ ಚಾಲಕರು ನಿಯಮ ಉಲ್ಲಂಸಿ ಮಕ್ಕಳನ್ನು ಕರೆದುಕೊಂಡು ಹೋದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದು ಎಸ್​ಪಿ ಡಾ.ಸಂಜೀವ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net