ರಸ್ತೆಯ ಮೇಲೆ ವಾಹನಗಳನ್ನು ಓಡಿಸುವವರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪ್ರತಿಯೊಬ್ಬರು 18 ವರ್ಷದ ನಂತರ ವಾಹನ ಚಾಲನೆ ಪರವಾನಗಿ ಪಡೆದು ವಾಹನಗಳನ್ನು ಚಾಲನೆ ಮಾಡಬೇಕು. ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿದರೆ, ವಾಹನದ ಮಾಲೀಕರು 25 ಸಾವಿರ ರೂ. ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ತಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಬೇಡಿ, ಅಲ್ಲದೇ ಈ ಸಂದರ್ಭದಲ್ಲಿ ಅಪಘಾತವಾದರೆ, ಯಾವುದೇ ರೀತಿ ಪರಿಹಾರ ದೊರೆಯುವುದಿಲ್ಲ. ಅಪಘಾತಗೀಡಾದ ವ್ಯಕ್ತಿ ಸಾವಿಗೀಡಾದರೆ, ಗಾಯಗೊಂಡರೆ ಮಾಲೀಕನೇ ಪರಿಹಾರ ನೀಡಬೇಕಾಗುತ್ತದೆ ಎಂದು ತಿಳಿಸಿದರು.